ನಗದು ಸೇರಿದಂತೆ ₹14 ಲಕ್ಷ ಮೌಲ್ಯದ ವಸ್ತು ಕಳವು

 ಹಾಸನ: ಹೊಳೆನರಸೀಪುರ ತಾಲ್ಲೂಕಿನ ತಾತನಹಳ್ಳಿ ಗ್ರಾಮದಲ್ಲಿ ಮನೆಯ ಹೆಂಚುಗಳನ್ನು ತೆಗೆದು ಬೀರುವಿನಲ್ಲಿಟ್ಟಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಹಾಗೂ ನಗದು ಸೇರಿದಂತೆ ₹14 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ.

ಗ್ರಾಮದ ರೇಣುಕೇಶ ಅವರು ಹೊಳೇನರಸೀಪುರದಲ್ಲಿ ಹೊಸ ಮನೆಯನ್ನು ಕಟ್ಟುತ್ತಿದ್ದು, ಮಂಗಳವಾರ ಬೆಳಿಗ್ಗೆ ಗ್ರಾಮದ ಮನೆಯ ಬೀಗ ಹಾಕಿಕೊಂಡು ಹೋಗಿದ್ದರು. ಹೊಳೇನರಸೀಪುರದಲ್ಲಿ ಕೆಲಸ ಮುಗಿಸಿಕೊಡು ಸಂಜೆ ಮನೆಗೆ ಬಂದು ನೋಡಿದಾಗ, ಮನೆಯ ಹಿಂಬಾಗಿಲು ತೆರೆದಿತ್ತು. ಅಟ್ಟದ ಬಳಿ ನೋಡಿದಾಗ, ಮನೆಯ ಹೆಂಚುಗಳನ್ನು ತೆಗೆದು ಕಳ್ಳರು ಒಳ ನುಗ್ಗಿದ್ದರು. ಕಬ್ಬಿಣದ ಬೀರುವನ್ನು ಒಡೆದು, ಲಾಕರ್‌ನಲ್ಲಿ ಇಟ್ಟಿದ್ದ ₹12.18 ಲಕ್ಷ ಮೌಲ್ಯದ 203 ಗ್ರಾಂ ಚಿನ್ನಾಭರಣ, ₹1.40 ಲಕ್ಷ ಮೌಲ್ಯದ ಬೆಳ್ಳಿಯ ಆಭರಣ ಹಾಗೂ ₹80ಸಾವಿರ ನಗದು ಕಳವು ಮಾಡಲಾಗಿದೆ. ಹಳ್ಳಿಮೈಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

Previous Post Next Post